ಪ್ರವಾಸಿಗರ ಸಾವಿನಲ್ಲೂ ಚಿಲ್ಲರೆ ರಾಜಕೀಯ: ಪ್ರಸಾದ್ ರಾಜ್ ಕಾಂಚನ್ ವಿರುದ್ಧ ದಿನೇಶ್ ಅಮೀನ್ ವಾಗ್ದಾಳಿ

ಪ್ರವಾಸಿಗರ ಸಾವಿನಲ್ಲೂ ಚಿಲ್ಲರೆ ರಾಜಕೀಯ: ಪ್ರಸಾದ್ ರಾಜ್ ಕಾಂಚನ್ ವಿರುದ್ಧ ದಿನೇಶ್ ಅಮೀನ್ ವಾಗ್ದಾಳಿ


ಉಡುಪಿ :ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಡಿ ಬೆಂಗ್ರೆಯಲ್ಲಿ ಇತ್ತೀಚಿಗೆ ಪ್ರವಾಸಿ ಬೋಟ್ ದುರಂತ ಸಂಭವಿಸಿ, ಮೂವರು ಪ್ರವಾಸಿಗರು ಸಾವಿಗಿಡಾಗಿದ್ದರು. ಈ ಬಗ್ಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣರವರು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ಆದರೆ ಕ್ಷೇತ್ರದ ವ್ಯಾಪ್ತಿಯ ಪರಿಮಿತಿ ಬಗ್ಗೆ ಕನಿಷ್ಠ ಜ್ಞಾನ ಇಲ್ಲದ ಉಡುಪಿ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾಗಿದ್ದ ಕಾಂಗ್ರೆಸ್ ಪಕ್ಷದ ಪ್ರಸಾದ್ ರಾಜ್ ಕಾಂಚನ್ ಉಡುಪಿ ಶಾಸಕರನ್ನು ಅವಮಾನ ಮಾಡುವ ರಾಜಕೀಯ ಉದ್ದೇಶದಿಂದ ಏನೇನೋ ಹೇಳುತ್ತಿದ್ದಾರೆ ಎಂದು ದಿನೇಶ್ ಅಮೀನ್ ಆರೋಪಿಸಿದರು.

ದೋಣಿ ದುರಂತ ಸಂಭವಿಸಿದ್ದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಡಿ ಬೆಂಗ್ರೆ ಕಡಲ ತೀರದಲ್ಲಿ.
ಪ್ರಬುದ್ಧ ಮತದಾರನ್ನು ಹೊಂದಿರುವ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ ಜನತೆಗೆ ಮಾಡಿದ ಅಪಮಾನ.

ಪ್ರವಾಸಿಗರ ಸುರಕ್ಷತೆ ಬಗ್ಗೆ ಮಾತನಾಡದೆ ಕೇವಲ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಪರ ಮಾತನಾಡಿ, ಇಲಾಖೆಯ ಭ್ರಷ್ಟಾಚಾರಕ್ಕೆ ಸಹಕಾರ ನೀಡುವಂತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Read more

ಕುಂದಾಪುರ: ಸುಜ್ಞಾನ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಗೆ 9ನೇ ರ‍್ಯಾಂಕ್ – ಆಡಳಿತ ಮಂಡಳಿಯಿಂದ 50 ಸಾವಿರ ನಗದು ಪುರಸ್ಕಾರ

ಕುಂದಾಪುರ: ದ್ವಿತೀಯ PUC ಫಲಿತಾಂಶದಲ್ಲಿ ಸುಣ್ಣಾರಿ ಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ. ಆಡಳಿತ ಮಂಡಳಿ ಮತ್ತು ಪೋಷಕರ ಸಂಭ್ರಮ.

ಎಕ್ಸಲೆಂಟ್ ಕಾಲೇಜು, ಸುಣ್ಣಾರಿ, ಕುಂದಾಪುರ: “ರಾಜ್ಯದಲ್ಲಿ ಅತ್ಯುತ್ತಮ ಸಾಧನೆ”

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಡೋಣ ಬಾ ಬೇಸಿಗೆ ಶಿಬಿರಕ್ಕೆ ಚಾಲನೆ.ಕ್ರೀಡಾಸಾಧಕರಿಗೆ ಸರಕಾರಿ ಉದ್ಯೋಗ ಅವಕಾಶ – ಕ್ರೀಡಾಪಟು ಪೊಲೀಸ್ ಅಧಿಕಾರಿ ನವೀನ್ ಕಾಂಚನ್

ಬ್ರಹ್ಮಾವರ : ಸುಜ್ಞಾನ ವಿದ್ಯಾ ಸಂಸ್ಥೆ ವಿದ್ಯಾರ್ಥಿವೇತನ ಪರೀಕ್ಷೆ ಉದ್ಘಾಟನೆ : ಅಂಕಗಳಿಕೆ ಜೊತೆಗೆ ಸಾಮಾಜಿಕ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಿ. ಮಾಜೀ ಸಂಸದ ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ: ಹೇರಾಡಿ ಹೊಸಳಾದಲ್ಲಿ ಮರಳು ಗಣಿಗಾರಿಕೆ – ಗುತ್ತಿಗೆದಾರರ ಮತ್ತು ನಾಗರೀಕ ನಡುವೆ ಜಟಾಪಟಿ, ಶಾಸಕರ ಹಾಗೂ ಸಂಸದರ ಮೌನ

Leave a Comment