ಕೋಡಿಯಲ್ಲಿ ನಿರ್ಗತಿಕ ತಾಯಿ, ಮಕ್ಕಳಿಗೆ ಪೊಲೀಸ್ ನೆರವು: ಗಂಗೊಳ್ಳಿ ಕರಾವಳಿ ಕಾವಲು ತಂಡದ ಮಾನವೀಯತೆ ಮೆರಗು

ಕೋಡಿಯಲ್ಲಿ ನಿರ್ಗತಿಕ ತಾಯಿ, ಮಕ್ಕಳಿಗೆ ಪೊಲೀಸ್ ನೆರವು: ಗಂಗೊಳ್ಳಿ ಕರಾವಳಿ ಕಾವಲು ತಂಡದ ಮಾನವೀಯತೆ ಮೆರಗು


ಕುಂದಾಪುರ: ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಕೋಡಿ ಗ್ರಾಮದ ಕೋಡಿ ಸೀವಾಕ್ ಸಮೀಪದ (Seevak Resto Cafe) ಬಳಿಯಲ್ಲಿ ಫೆ.12 ರಂದು ಒಬ್ಬ ಮಹಿಳೆ ತನ್ನ ಮೂರು ಚಿಕ್ಕ ಮಕ್ಕಳೊಂದಿಗೆ ದುಃಖಿತ ಸ್ಥಿತಿಯಲ್ಲಿ ನಿಂತಿರುವುದನ್ನು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಬಾಯಿ ಹಾಗೂ ಕೋಡಿ ಬೀಟ್ ಸಿಬ್ಬಂದಿ ಎಚ್‌ಸಿ 1746 ಗೋಪಾಲ ಖಾರ್ವಿ ಅವರು ರೌಂಡ್ಸ್ ಕರ್ತವ್ಯದ ವೇಳೆ ಗಮನಿಸಿದರು.

ತಕ್ಷಣವೇ ಮಾನವೀಯತೆ ತೋರಿದ ಪೊಲೀಸ್ ಸಿಬ್ಬಂದಿ ಮಹಿಳೆಯನ್ನು ವಿಚಾರಣೆ ನಡೆಸಿದಾಗ, ಆಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಂಗನಹಳ್ಳಿ ಸ್ಲಂ ನಿವಾಸಿ ಸಂಗೀತ (27), ಗಂಡ ಬದ್ರೇಶ್ ಎಂದು ತಿಳಿದುಬಂದಿದೆ.
ಆಕೆಯ ಜೊತೆಗೆ ಮೂವರು ಮಕ್ಕಳಾದ ಅಜಯ (9), ಖುಷಿ (8) ಮತ್ತು ರೋಜಾ (5) ಇದ್ದರು.

ಕುಟುಂಬದಲ್ಲಿ ದಿಕ್ಕು ದೆಸೆ ಇಲ್ಲದೆ ನಿರ್ಗತಿಕರಾಗಿ ಅಲೆಮಾರಿ ಜೀವನ ನಡೆಸುತ್ತಿದ್ದ ಸಂಗೀತ ಅವರು, ತನ್ನ ಹಾಗೂ ಮಕ್ಕಳ ಭವಿಷ್ಯಕ್ಕಾಗಿ, ವಿಶೇಷವಾಗಿ ಮಕ್ಕಳ ವಿದ್ಯಾಭ್ಯಾಸದ ಉದ್ದೇಶದಿಂದ ಸಹಾಯಕ್ಕಾಗಿ ಅಲೆದಾಡುತ್ತಿರುವುದಾಗಿ ತಿಳಿಸಿದರು.

ಮಹಿಳೆಯ ಪರಿಸ್ಥಿತಿಯನ್ನು ಮನಗಂಡ ಪೊಲೀಸ್ ಅಧಿಕಾರಿಗಳು ಅಗತ್ಯ ನೆರವು ನೀಡುವ ಕ್ರಮ ಕೈಗೊಂಡಿದ್ದು, ಸಂಬಂಧಿಸಿದ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸಿ ಸೂಕ್ತ ಆಶ್ರಯ ಹಾಗೂ ಸಹಾಯ ಒದಗಿಸಲು ಮುಂದಾಗಿದ್ದಾರೆ.

ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳ ಈ ಮಾನವೀಯ ನಡೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಪೊಲೀಸ್ ಇಲಾಖೆಯು ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದಲ್ಲದೆ, ಸಂಕಷ್ಟದಲ್ಲಿರುವವರಿಗೂ ನೆರವಾಗುತ್ತಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಾಗಿದೆ.

Join WhatsApp

Join Now

Join Telegram

Join Now

Read more

ಸುಜ್ಞಾನ ವಿದ್ಯಾ ಸಂಸ್ಥೆಯಲ್ಲಿ ‘ವಾಲ್ಬೆಲ್ಲ’ ಕುಂದಾಪ್ರ ಕನ್ನಡದ ಸಂಸ್ಕೃತಿ ಸಮಾರಂಭದ ಸಮಾರೋಪ: ಯುವಜನತೆ ದುಶ್ಚಟಗಳಿಂದ ದೂರವಿದ್ದು ಗುರಿಯತ್ತ ಸಾಗಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ಸುಜ್ಞಾನದಂಗಳದಿ ವಾಲ್ಬೆಲ್ಲದ ಸವಿ ಸಂಭ್ರಮ: ಕುಂದಾಪ್ರ ಕನ್ನಡದ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಕುಂದಾಪ್ರ ಕನ್ನಡದ ಸವಿ ಉಳಿಸಿ ಬೆಳಸುವ ಜವಾಬ್ದಾರಿ ನಮ್ಮದು.ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

Leave a Comment