ಯುದ್ಧದ ಕಾರ್ಮೋಡ ನಡುವೆ ಸಾಲಿಗ್ರಾಮ, ನಂಚಾರು ವಿವಿದೆಡೆ ಆಕಾಶದಲ್ಲಿ ಜೆಟ್ ಗರ್ಜನೆ: ಜನರಲ್ಲಿ ತೀವ್ರ ಆತಂಕ.! ಸರ್ವೆ ಕಾರ್ಯವೇ ಕಾರಣವೆಂಬ ಸುಳಿವು

ಯುದ್ಧದ ಕಾರ್ಮೋಡ ನಡುವೆ ಸಾಲಿಗ್ರಾಮ, ನಂಚಾರು ವಿವಿದೆಡೆ ಆಕಾಶದಲ್ಲಿ ಜೆಟ್ ಗರ್ಜನೆ: ಜನರಲ್ಲಿ ತೀವ್ರ ಆತಂಕ.! ಸರ್ವೆ ಕಾರ್ಯವೇ ಕಾರಣವೆಂಬ ಸುಳಿವು


ಉಡುಪಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಬೆಳವಣಿಗೆಗಳ ನಡುವೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ, ಸಾೖಬ್ರಕಟ್ಟೆ ಹಾಗೂ ನಂಚಾರು ಭಾಗದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಜೆಟ್ ವಿಮಾನ ಹಾರಾಟ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಆಕಾಶದಲ್ಲಿ ಅತೀ ಕಡಿಮೆ ಎತ್ತರದಲ್ಲಿ ವೇಗವಾಗಿ ಹಾರಾಡುತ್ತಿರುವ ಜೆಟ್ ವಿಮಾನಗಳನ್ನು ಕಂಡು ಸಾರ್ವಜನಿಕರು ಭಯಭೀತರಾಗಿದ್ದಾರೆ. ಯುದ್ಧ ಪರಿಸ್ಥಿತಿಯ ಹಿನ್ನಲೆಯಲ್ಲಿ ಈ ರೀತಿಯ ಚಟುವಟಿಕೆಗಳು ಸಾಮಾನ್ಯ ಜನರಲ್ಲಿ ಅನೇಕ ಅನುಮಾನಗಳಿಗೆ ಕಾರಣವಾಗಿವೆ. ವಿಶೇಷವಾಗಿ ರಾತ್ರಿ ಹಾಗೂ ಬೆಳಗಿನ ಸಮಯದಲ್ಲಿ ಕೇಳಿಬರುತ್ತಿರುವ ಗದ್ದಲದ ಶಬ್ದ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ವಿವಿಧ ರೀತಿಯ ಊಹಾಪೋಹಗಳು ಹರಿದಾಡುತ್ತಿವೆ.
ಇದಕ್ಕೆ ಸಂಬಂಧಿಸಿದಂತೆ ಲಭ್ಯವಾದ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಸಂಬಂಧಿಸಿದ ಸರ್ವೇ ಕಾರ್ಯ ನಡೆಯುತ್ತಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಕುರಿತು ಅಧಿಕೃತ ದೃಢೀಕರಣ ಇನ್ನಷ್ಟೇ ಲಭ್ಯವಾಗಬೇಕಿದೆ.
ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ತ್ವರಿತವಾಗಿ ಸ್ಪಷ್ಟನೆ ನೀಡಿದರೆ ಜನರಲ್ಲಿ ಉಂಟಾಗಿರುವ ಆತಂಕ ನಿವಾರಣೆಯಾಗಲಿದೆ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment