ಬಡವರ ವಿವಾಹದ ಕನಸಿಗೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಆಸರೆ: ಏಪ್ರಿಲ್ 9ಕ್ಕೆ ಉಚಿತ ಸಾಮೂಹಿಕ ವಿವಾಹ.

ಬಡವರ ವಿವಾಹದ ಕನಸಿಗೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಆಸರೆ: ಏಪ್ರಿಲ್ 9ಕ್ಕೆ ಉಚಿತ ಸಾಮೂಹಿಕ ವಿವಾಹ.


​ಉಡುಪಿ: ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಮತ್ತು ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಈ ಬಾರಿಯೂ ‘ಉಚಿತ ಸಾಮೂಹಿಕ ವಿವಾಹ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಏಪ್ರಿಲ್ 9ಕ್ಕೆ ಮುಹೂರ್ತ ನಿಗದಿ:
ಏಪ್ರಿಲ್ 09, 2026ರ ಗುರುವಾರ ಸಂಜೆ ಸುಮುಹೂರ್ತದ ‘ಗೋಧೂಳಿ ಲಗ್ನ’ದಲ್ಲಿ ಈ ವಿವಾಹ ಮಹೋತ್ಸವವು ಜರುಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅತ್ಯಂತ ಶಿಸ್ತುಬದ್ಧ ಹಾಗೂ ಸಂಪ್ರದಾಯಬದ್ಧವಾಗಿ ಕಾರ್ಯಕ್ರಮವನ್ನು ನಡೆಸಲು ಆಯೋಜಕರು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ನೊಂದಾವಣಿಗೆ ಮಾರ್ಚ್ 12 ಕೊನೆಯ ದಿನ:
ಉಚಿತ ಸಾಮೂಹಿಕ ವಿವಾಹ ಮಾಡಿಕೊಳ್ಳಲು ಇಚ್ಛಿಸುವ ಮೊಗವೀರ ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಧು-ವರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಮಾರ್ಚ್ 12, 2026ರ ಒಳಗಾಗಿ ತಮ್ಮ ವ್ಯಾಪ್ತಿಯ ಸ್ಥಳೀಯ ಮೊಗವೀರ ಯುವ ಸಂಘಟನೆಯ ಘಟಕಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ನೊಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Join WhatsApp

Join Now

Join Telegram

Join Now

Read more

ಕುಂದಾಪುರ: ಸುಜ್ಞಾನ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಗೆ 9ನೇ ರ‍್ಯಾಂಕ್ – ಆಡಳಿತ ಮಂಡಳಿಯಿಂದ 50 ಸಾವಿರ ನಗದು ಪುರಸ್ಕಾರ

ಕುಂದಾಪುರ: ದ್ವಿತೀಯ PUC ಫಲಿತಾಂಶದಲ್ಲಿ ಸುಣ್ಣಾರಿ ಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ. ಆಡಳಿತ ಮಂಡಳಿ ಮತ್ತು ಪೋಷಕರ ಸಂಭ್ರಮ.

ಎಕ್ಸಲೆಂಟ್ ಕಾಲೇಜು, ಸುಣ್ಣಾರಿ, ಕುಂದಾಪುರ: “ರಾಜ್ಯದಲ್ಲಿ ಅತ್ಯುತ್ತಮ ಸಾಧನೆ”

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಡೋಣ ಬಾ ಬೇಸಿಗೆ ಶಿಬಿರಕ್ಕೆ ಚಾಲನೆ.ಕ್ರೀಡಾಸಾಧಕರಿಗೆ ಸರಕಾರಿ ಉದ್ಯೋಗ ಅವಕಾಶ – ಕ್ರೀಡಾಪಟು ಪೊಲೀಸ್ ಅಧಿಕಾರಿ ನವೀನ್ ಕಾಂಚನ್

ಬ್ರಹ್ಮಾವರ : ಸುಜ್ಞಾನ ವಿದ್ಯಾ ಸಂಸ್ಥೆ ವಿದ್ಯಾರ್ಥಿವೇತನ ಪರೀಕ್ಷೆ ಉದ್ಘಾಟನೆ : ಅಂಕಗಳಿಕೆ ಜೊತೆಗೆ ಸಾಮಾಜಿಕ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಿ. ಮಾಜೀ ಸಂಸದ ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ: ಹೇರಾಡಿ ಹೊಸಳಾದಲ್ಲಿ ಮರಳು ಗಣಿಗಾರಿಕೆ – ಗುತ್ತಿಗೆದಾರರ ಮತ್ತು ನಾಗರೀಕ ನಡುವೆ ಜಟಾಪಟಿ, ಶಾಸಕರ ಹಾಗೂ ಸಂಸದರ ಮೌನ

Leave a Comment