ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ‘ರೈತ ಸೌಧ’ ಲೋಕಾರ್ಪಣೆ: ​ಸೇವೆಯಲ್ಲಿ ವಾಣಿಜ್ಯ ಬ್ಯಾಂಕ್ ಗಳಿಗಿಂತ ಸಹಕಾರಿ ಸಂಸ್ಥೆಗಳೇ ಶ್ರೇಷ್ಠ.ಡಾ. ಎಂ.ಎನ್. ರಾಜೇಂದ್ರ ಕುಮಾರ್

ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ‘ರೈತ ಸೌಧ’ ಲೋಕಾರ್ಪಣೆ: ​ಸೇವೆಯಲ್ಲಿ ವಾಣಿಜ್ಯ ಬ್ಯಾಂಕ್ ಗಳಿಗಿಂತ ಸಹಕಾರಿ ಸಂಸ್ಥೆಗಳೇ ಶ್ರೇಷ್ಠ.ಡಾ. ಎಂ.ಎನ್. ರಾಜೇಂದ್ರ ಕುಮಾರ್ಕುಂದಾಪುರ: “ಸಹಕಾರ ವ್ಯವಸ್ಥೆಯ ಮೇಲೆ ಸಾರ್ವಜನಿಕರು ಇಟ್ಟಿರುವ ಅಚಲ ನಂಬಿಕೆಯೇ ಈ ಕ್ಷೇತ್ರ ಇಷ್ಟೊಂದು ವ್ಯಾಪಕವಾಗಿ ಬೆಳೆಯಲು ಕಾರಣ. ಇಂದು ಸಹಕಾರ ಕ್ಷೇತ್ರವು ಅಭಿವೃದ್ಧಿ ಮತ್ತು ಸ್ವಾವಲಂಬನೆಯ ಹಾದಿಯಲ್ಲಿ ಸಾಗುತ್ತಾ ವಾಣಿಜ್ಯ ಬ್ಯಾಂಕುಗಳಿಗಿಂತಲೂ ಹೆಚ್ಚು ಬಲಿಷ್ಠವಾಗಿ ಹೊರಹೊಮ್ಮುತ್ತಿದೆ” ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ (SCDCC) ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

​ಅವರು ಮಾರ್ಚ್ 14ರಂದು ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ಸುಸಜ್ಜಿತ ನೂತನ ಕಟ್ಟಡ ‘ರೈತ ಸೌಧ’ ವನ್ನು ಉದ್ಘಾಟಿಸಿ ಮಾತನಾಡಿ ಅವರು
​ಒಂದು ಸಣ್ಣ ಗ್ರಾಮದ ವ್ಯಾಪ್ತಿಯಲ್ಲಿರುವ ಅಂಪಾರು ಸಹಕಾರಿ ಸಂಘವು ಲಿಫ್ಟ್, ಹವಾನಿಯಂತ್ರಿತ ವ್ಯವಸ್ಥೆ ಹಾಗೂ ಸುಸಜ್ಜಿತ ಸಭಾಂಗಣದಂತಹ ಆಧುನಿಕ ಸೌಲಭ್ಯಗಳನ್ನು ಅಳವಡಿಸಿಕೊಂಡಿರುವುದು ಮಾದರಿಯಾಗಿದೆ ಎಂದ ಅವರು, ಈ ಕಟ್ಟಡಕ್ಕೆ 10 ಲಕ್ಷ ರೂಪಾಯಿ ದೇಣಿಗೆ ಹಾಗೂ ಸಭಾಂಗಣದ ಪೀಠೋಪಕರಣ ವೆಚ್ಚವನ್ನು ಭರಿಸುವುದಾಗಿ ಘೋಷಿಸಿದರು.

ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು ಎಂಬ ದೂರದೃಷ್ಟಿಯಿಂದ 25 ವರ್ಷಗಳ ಹಿಂದೆ ಆರಂಭವಾದ ನವೋದಯ ಸ್ವಸಹಾಯ ಗುಂಪುಗಳು ಇಂದು 9 ಜಿಲ್ಲೆಗಳಲ್ಲಿ ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತಿವೆ. ನನ್ನ ಆಸಕ್ತಿ ಸಹಕಾರ ಕ್ಷೇತ್ರದ ಅಭಿವೃದ್ಧಿಯೇ ಹೊರತು ರಾಜಕೀಯವಲ್ಲ. ರಾಜಕೀಯದಲ್ಲಿ ಉತ್ತಮ ವ್ಯಕ್ತಿಗಳನ್ನು ಬೆಳೆಸೋಣ,” ಎಂದು ಅವರು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ರಾಜೇಂದ್ರ ಕುಮಾರ್ ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕೆ. ಪ್ರದೀಪ್ ಶೆಟ್ಟಿ ಗುಡಿಬೆಟ್ಟು ಮಾತನಾಡಿ, “ಅಂಪಾರಿನ ಜನರ ಕನಸು ಇಂದು ನನಸಾಗಿದೆ. 1997ರಲ್ಲಿ ಸ್ವಂತ ಕಟ್ಟಡ ಹೊಂದಿದ್ದ ಸಂಘ, ಇಂದು ತಂತ್ರಜ್ಞಾನದ ಬಳಕೆಯೊಂದಿಗೆ ಪಾರದರ್ಶಕ ವ್ಯವಹಾರ ನಡೆಸಿ ಮತ್ತೆ ಲಾಭದ ಹಾದಿಗೆ ಮರಳಿದೆ,” ಎಂದು ಸಂತಸ ಹಂಚಿಕೊಂಡರು.

ಆಡಳಿತ ಸಭಾಂಗಣವನ್ನು ಉದ್ಘಾಟಿಸಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಒಂದು ಗ್ರಾಮದ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಅಂಪಾರು ಸಹಕಾರಿ ವ್ಯವಸಾಯಿಕ ಸಂಘ ಇಷ್ಟೊಂದು ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿರುವುದು ಆಡಳಿತ ಮಂಡಳಿ, ಸದಸ್ಯರು, ನೌಕರವೃಂದದ ಪರಿಶ್ರಮದ ಫಲ ಎಂದರು.

ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ಮಾಜಿ ಶಾಶಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರ ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿ ಮುನ್ನೆಡೆಯುತ್ತಿದೆ. ಜನತೆಯಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗುತ್ತಿದೆ. ಇವತ್ತು ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕುಗಳಲ್ಲಿ ಎಸ್.ಸಿ.ಡಿಸಿಸಿ ಬ್ಯಾಂಕ್ ಶ್ರೇಷ್ಠತೆ ಹೊಂದಿದೆ ಎಂದರು.

ಗೋದಾಮು ಕಟ್ಟಡವನ್ನು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿರ್ದೇಶಕ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಉದ್ಘಾಟಿಸಿದರು.
ಮೊಳಹಳ್ಳಿ ಶಿವರಾವ್ ಸಭಾಂಗಣವನ್ನು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ ಉದ್ಘಾಟಿಸಿದರು.
ಸಾಮಾನ್ಯ ಸೇವಾ ಕೇಂದ್ರವನ್ನು ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಗೋದಾಮು ಕಟ್ಟಡವನ್ನು ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್ ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಜೆ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಕುಂದಾಪುರ ಇದರ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಮೋಹನ ವೈದ್ಯ, ಕಿರಣ್ ಹೆಗ್ಡೆ, ಅರುಣ್ ಕುಮಾರ್ ಶೆಟ್ಟಿ, ಮನೋಹರ್ ಶೆಟ್ಟಿ, ಜಯರಾಮ ಶೆಟ್ಟಿ, ಉಮೇಶ ಕೊಠಾರಿ, ಅಜಿತ್ ಕುಮಾರ್, ಶೀಮತಿ ಜ್ಯೋತಿ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಭಾರತಿ ಬಾಲಕೃಷ್ಣ ಶೇಟ್, ಮಂಜುನಾಥ ನಾಯ್ಕ, ಸುನಿಲ್, ವಲಯ ಮೇಲ್ವಿಚಾರಕ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷರಾದ ನವೀನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಂಘದ ಸಿಬ್ಬಂದಿ ರವಿಕಲಾ ಜೋಗಿ ಪ್ರಾರ್ಥನೆ ಮಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟ ವಂದಿಸಿದರು.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment