ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಕೋಟ, ಜೂನ್ 1: ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಈ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಸಲ್ಲಿಸಿದ್ದ ಮನವಿಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಬಿಡುಗಡೆಗೆ ಆದೇಶ ನೀಡಿದ್ದಾರೆ.

ಕರ್ನಾಟಕ ಕರಾವಳಿ ಭಾಗವು ದೈವ-ದೇವರುಗಳ ಆರಾಧನೆಗೆ ಹೆಸರುವಾಸಿಯಾಗಿದ್ದು, ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನವು ಈ ಭಾಗದ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿದೆ. ಇತಿಹಾಸದ ಪ್ರಕಾರ ಬಾರ್ಕೂರು ಅರಸರ ಆಳ್ವಿಕೆಗೆ ಒಳಪಟ್ಟಿದ್ದ ಈ ಪ್ರದೇಶದ ಸಾಮಂತ ಅರಸನು ದೈಹಿಕವಾಗಿ ವಡ್ಡನಾಗಿದ್ದ ಕಾರಣ, ಆತನ ಆಳ್ವಿಕೆಯ ಪ್ರದೇಶವನ್ನು ‘ವಡ್ಡರ್ಸೆ’ ಎಂದು ಕರೆಯಲಾಗುತ್ತಿತ್ತು ಎನ್ನಲಾಗಿದೆ.

ಅಲ್ಲಿನ ರಾಜರು ಪ್ರತಿಷ್ಠಾಪಿಸಿ ಆರಾಧಿಸಿಕೊಂಡು ಬಂದಿರುವ ಈ ಮಹಾಲಿಂಗೇಶ್ವರ ದೇವಸ್ಥಾನವು ಭಕ್ತರ ಭಕ್ತಿ ಹಾಗೂ ನಂಬಿಕೆಯ ಕೇಂದ್ರವಾಗಿ ಬೆಳೆದಿದೆ.
ಇತ್ತೀಚಿನ ವರ್ಷಗಳಲ್ಲಿ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಭಕ್ತರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ದೇವಸ್ಥಾನದ ಸುತ್ತಮುತ್ತ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.

ಭಕ್ತರ ಅನುಕೂಲಕ್ಕಾಗಿ ವಿವಿಧ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳ ನೀಲನಕ್ಷೆಯನ್ನೂ ಸಿದ್ಧಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರದ ನೆರವು ಒದಗಿಸುವಂತೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅವರು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಗಣಿಸಿದ ಸಚಿವರು ದೇವಸ್ಥಾನ ಅಭಿವೃದ್ಧಿಗಾಗಿ 5 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಅನುದಾನ ಮಂಜೂರಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು, ಭಕ್ತರು ಹಾಗೂ ದೇವಸ್ಥಾನ ಆಡಳಿತ ಮಂಡಳಿಯವರು ಅಜಿತ್ ಕುಮಾರ್ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಅವರ ಸಹಕಾರ ಮತ್ತು ಮಾರ್ಗದರ್ಶನ ನಿರಂತರವಾಗಿ ದೊರೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

Join WhatsApp

Join Now

Join Telegram

Join Now

Read more

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

ಕೋಡಿ ಕನ್ಯಾನದ ಕಡಲ ತಡಿಯಲ್ಲಿ ಅದ್ದೂರಿ ‘ಜನಪದ ಸಿರಿ’ ಸಂಭ್ರಮ: ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ನಾವು ವಿಫಲರಾಗಿದ್ದೇವೆ – ಶಂಕರ್ ಕುಂದರ್

Leave a Comment