ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ಕುಂದಾಪುರ, ಜು. 4: ಕುಂದಾಪ್ರ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಇಲ್ಲಿನ ಕಲಾ ಪ್ರಾಕಾರಗಳ,ಪರಂಪರೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಮತ್ತು ಯಡಾಡಿ–ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ವಾಲ್ಬೆಲ್ಲ’ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಜುಲೈ 6ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ಶುಕ್ರವಾರದಂದು ಯಡಾಡಿ–ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು
ಕರ್ನಾಟಕ ಸರ್ಕಾರವು ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿ ಪೂರ್ಣ ಪ್ರಮಾಣದ ಕುಂದಾಪ್ರ ಕನ್ನಡ ಅಧ್ಯಯನ ಪೀಠವನ್ನು ಸ್ಥಾಪಿಸಿದೆ. ಈ ಪೀಠ ಸ್ಥಾಪನೆಯಾದ ಬಳಿಕ ಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಈ ನೆಲದ ಕಲೆ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸೊಗಡನ್ನು ಪರಿಚಯಿಸುವ ಮಹತ್ತರ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
​ನಮ್ಮ ನಮ್ಮ ಮನೆಗಳಲ್ಲೇ ಕುಂದಾಪ್ರ ಕನ್ನಡ ಮಾತನಾಡುವುದು ಕಡಿಮೆಯಾಗುತ್ತಿದೆ. ಕೆಲವರು ತಮ್ಮ ಮಕ್ಕಳೊಂದಿಗೆ ಶುದ್ಧ ಕನ್ನಡದಲ್ಲಿ, ಇನ್ನು ಕೆಲವರು ಇಂಗ್ಲೀಷ್‌ನಲ್ಲಿ ಮಾತನಾಡುತ್ತಾರೆ. ಮುಂಬೈನಲ್ಲಿರುವವರು ಮನೆಗಳಲ್ಲಿ ಮರಾಠಿಯಲ್ಲೇ ಮಾತನಾಡುತ್ತಾರೆ. ಆದರೆ ನಾವು ನಮ್ಮ ಕುಂದಾಪ್ರ ಕನ್ನಡವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿದೆ. ಮಕ್ಕಳಲ್ಲೂ ಈ ಭಾಷೆಯ ಅಭಿಮಾನ ಹೆಚ್ಚಿಸಬೇಕಾಗಿದೆ ಎಂದು ಕರೆ ನೀಡಿದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ ಮಾತನಾಡಿ, ಬೈಂದೂರು, ಕುಂದಾಪುರ, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕಿನ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದ ವಿಜೇತರಿಗೆ ಪ್ರಥಮ ರೂ.10,000, ದ್ವಿತೀಯ ರೂ.7,000 ಹಾಗೂ ತೃತೀಯ ರೂ.5,000 ನಗದು ಬಹುಮಾನ ನೀಡಲಾಗುವುದು. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದ ವಿಜೇತರಿಗೆ ಪ್ರಥಮ ರೂ.5,000, ದ್ವಿತೀಯ ರೂ.3,000 ಹಾಗೂ ತೃತೀಯ ರೂ.2,000 ಬಹುಮಾನ ನೀಡಲಾಗುವುದಲ್ಲದೆ, ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಹೇಳಿದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ಭರತ್ ಕುಮಾರ್ ಶೆಟ್ಟಿ ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಟ್ರಸ್ಟ್ ವತಿಯಿಂದ ಪ್ರತಿಷ್ಠಿತ ವಿದ್ಯಾರಣ್ಯ ಪುರಸ್ಕಾರ ಪ್ರದಾನ ಮಾಡಲಾಗುವುದು. ಈ ಬಾರಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ರಾಜು ಮೊಗವೀರ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಂಯೋಜಕ ಪ್ರೊ. ನಾಗಪ್ಪಗೌಡ ಅವರನ್ನು ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಸಂಜೆ 4 ಗಂಟೆಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕೋಟೇಶ್ವರ, ಶಿರಿಯಾರ ಹಾಗೂ ಬಿದ್ಕಲ್‌ಕಟ್ಟೆ ಭಾಗಗಳಿಂದ ಆಗಮಿಸುವವರಿಗೆ ಸಂಸ್ಥೆಯ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಪಂಜು ಗಂಗೊಳ್ಳಿ, ಉದಯ ಶೆಟ್ಟಿ ಪಡುಕೆರೆ ಉಪಸ್ಥಿತರಿದ್ದರು. ಸಮಿತಿ ಸದಸ್ಯ ಹಾಗೂ ಪತ್ರಕರ್ತ ಕೆ.ಸಿ. ರಾಜೇಶ್ ಸ್ವಾಗತಿಸಿ ವಂದಿಸಿದರು.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment