ಕುಂದಾಪುರ: ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ-ಮತ್ಯಾಡಿಯಲ್ಲಿ ಗುರುವಂದಾನ ಕಾರ್ಯಕ್ರಮ

ಕುಂದಾಪುರ: ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ-ಮತ್ಯಾಡಿಯಲ್ಲಿ ಗುರುವಂದಾನ ಕಾರ್ಯಕ್ರಮ: ನಿವೃತ್ತ ಶಿಕ್ಷಕ ಮುರುಳಿ ಕಡೆಕಾರ್ ಅವರಿಗೆ ಗೌರವ ಸಮರ್ಪಣೆ

ಕುಂದಾಪುರ: ವಿದ್ಯಾರ್ಥಿಗಳ ಜೀವನದ ಪುಸ್ತಕದಲ್ಲಿ ಉಪಯೋಗಿಸಿದ ಪುಟಕ್ಕಿಂತ ಮುಂದೆ ಉಪಯೋಗಿಸುವ ಪುಟಗಳ ಸಂಖ್ಯೆ ಬಹಳಷ್ಟಿದೆ.ಭವಿಷ್ಯದಲ್ಲಿ ಆ ಪುಟಗಳು ಸುಂದರವಾಗಿ ಕಾಣಿಸಿಕೊಳ್ಳಬೇಕಾದರೆ ತಾವು ಇಂದಿನಿಂದಲೇ ಜೀವನದಲ್ಲಿ ಶಿಸ್ತು ಮತ್ತು ನೈತಿಕತೆಯನ್ನು ಮೈಗೂಡಿಸಿ ಕೊಳ್ಳಬೇಕು.ವಿದ್ಯಾರ್ಥಿಗಳ ಜೀವನ ಹಸನಾಗಲು ಶಿಕ್ಷಕರ ಸಮರ್ಪಣಾ ಮನೋಭಾವನೆ ಮತ್ತು ತ್ಯಾಗ ಬಹು ಮುಖ್ಯ ಪಾತ್ರ ವಾಗಿರುತ್ತದೆ ಎಂದು
ನಿವೃತ್ತ ಶಿಕ್ಷಕ ಹಾಗೂ ಯಕ್ಷಗಾನ ಕಲಾರಂಗ ಉಡುಪಿ ಇದರ ಕಾರ್ಯದರ್ಶಿ ಮುರಳಿ ಕಡೇಕಾರ್ ತಿಳಿಸಿದರು.

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಜ್ಞಾನ ಪದವಿಪೂರ್ವ ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ಗಳ ಜಂಟಿ ಆಶ್ರಯದಲ್ಲಿ 2026ನೇ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರಕ್ಕೆ ದ್ವನಿಯಾದರು.

ರಸ್ತೆಯಲ್ಲಿ ವಿದ್ಯಾರ್ಥಿಗಳು ನಡವಳಿಕೆ ಬಗ್ಗೆಯೂ ತಿಳಿ ಹೇಳಿ, ರಸ್ತೆ ಸುರಕ್ಷತೆ ಹಾಗೂ ಜೀವನ ಭದ್ರತೆಯ ಕುರಿತು ಜಾಗೃತಿಯ ಮಾತುಗಳನ್ನಾಡಿದರು.

ಮೊಬೈಲ್ ಬೆಳಕು ಮತ್ತೆ ಬೆಂಕಿ ಎರಡನ್ನು ಹಚ್ಚಬಲ್ಲದು. ಅದರಲ್ಲಿರುವ ಉತ್ತಮ ಅಂಶಗಳನ್ನು ಮಾತ್ರ ಸ್ವೀಕರಿಸುವ ಯೋಚನೆ ವಿದ್ಯಾರ್ಥಿಗಳಲ್ಲಿರಬೇಕು ಎಂದರು.

ಯಶಸ್ಸಿನ ಫಲಿತಾಂಶವೇ ವಿದ್ಯಾರ್ಥಿಗಳು ಶಿಕ್ಷಕರಿಗೆ ನೀಡುವ ಅತ್ತ್ಯುತ್ತಮ ಕೊಡುಗೆ. ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಕಂಡಾಗ ಹೆತ್ತವರಿಗಿಂತ ಹೆಚ್ಚು ಸಂತೋಷವನ್ನು ಶಿಕ್ಷಕರು ಅನುಭವಿಸುತ್ತಾರೆ. ಶಿಕ್ಷಕರು ಕೂಡ ನಿಸ್ವಾರ್ಥ ಮನೋಭಾವನೆಯಿಂದ ಸೇವೆ ಮಾಡಿದಲ್ಲಿ ಮುಂದೊಂದು ದಿನ ಅದು ನಿಮಗೆ ಉತ್ತಮ ಫಲಿತಾಂಶ ನೀಡಲಿದೆ ಎಂದರು.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಜೀವನಕ್ಕೂ ಸ್ಪಷ್ಟವಾದ ಹಾಗೂ ಉನ್ನತ ಗುರಿಯೊಂದು ಅಗತ್ಯವಾಗಿದೆ. ನಮ್ಮ ಸಾಂಸ್ಕೃತಿಕ ಬೇರುಗಳು, ಆಚಾರ-ವಿಚಾರಗಳು ಮತ್ತು ಪರಂಪರೆಯನ್ನು ಅರ್ಥೈಸಿಕೊಂಡು ಬದುಕುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಇಂತಹ ಗುರುವಂದನಾ ಕಾರ್ಯಕ್ರಮಗಳು ಯುವಜನತೆಯಲ್ಲಿ ಶಿಕ್ಷಕರ ಬಗ್ಗೆ ಗೌರವ ಮೂಡಿಸುವುದರ ಜತೆಗೆ, ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಅಭಿಮಾನ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಶ್ಲಾಘಿಸಿದರು.

ಸಂಸ್ಥೆಯ ಅಧ್ಯಕ್ಷ ರಮೇಶ್ ಶೆಟ್ಟಿ ಮಾತನಾಡಿ, ಪ್ರತಿವರ್ಷವೂ ಶ್ರೇಷ್ಠ ಸಾಧಕರು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸುವುದರ ಹಿಂದೆ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಉದ್ದೇಶವಿದೆ ಎಂದರು.

ವಿದ್ಯಾರ್ಥಿಗಳು ಇಂತಹ ಮಹನೀಯರ ಬದುಕಿನಿಂದ ಪ್ರೇರಣೆ ಪಡೆದು, ಅವರನ್ನು ತಮ್ಮ ಜೀವನದ ಮಾರ್ಗದರ್ಶಕರನ್ನಾಗಿ ಸ್ವೀಕರಿಸಬೇಕು. ಉತ್ತಮ ಕೆಲಸ ಮತ್ತು ಸಾಧನೆಯನ್ನು ಸಮಾಜ ಎಂದಿಗೂ ಗುರುತಿಸುತ್ತದೆ ಎಂಬ ಅರಿವು ವಿದ್ಯಾರ್ಥಿಗಳಲ್ಲಿ ಮೂಡಬೇಕು ಎಂದು ಹೇಳಿದರು.

ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ಪ್ರೀತಿಸಿ, ಪ್ರೀತಿಯಿಂದ ತಿದ್ದಿ-ತೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಮಾತನಾಡಿ, ವಿಶ್ವದಲ್ಲಿಯೇ ಅತ್ಯಂತ ಪವಿತ್ರ ಹಾಗೂ ಗೌರವಾನ್ವಿತ ವೃತ್ತಿಗಳಲ್ಲಿ ಶಿಕ್ಷಕ ವೃತ್ತಿಯೂ ಪ್ರಮುಖವಾದದ್ದು ಎಂದರು.
ಇನ್ನೊಬ್ಬರ ಬದುಕಿಗೆ ಆಕಾರ ನೀಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಶಿಕ್ಷಕರು ನೀಡುವ ಬುದ್ಧಿಮಾತು ಹಾಗೂ ಮಾರ್ಗದರ್ಶನವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.

ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕಾಗಿ ಹೆತ್ತವರು ಪಡುವ ಶ್ರಮ ಹಾಗೂ ಮಾಡುವ ತ್ಯಾಗವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು. ಬದುಕಿನಲ್ಲಿ ಏನಾದರೂ ದೊಡ್ಡ ಸಾಧನೆ ಮಾಡಬೇಕು ಎಂಬ ಛಲ ಹಾಗೂ ಸ್ಪಷ್ಟ ಗುರಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಇರಬೇಕು ಎಂದು ಹುರಿದುಂಬಿಸಿದರು.

ಇದೇ ಸಂದರ್ಭದಲ್ಲಿ ಶಾಲೆ ಮತ್ತು ಕಾಲೇಜಿನಲ್ಲಿ ಸುದೀರ್ಘ ಅವಧಿಯಿಂದ ಶ್ರೇಷ್ಠ ಸೇವೆ ಸಲ್ಲಿಸುತ್ತಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಪ್ರೀತಿ ಚಂದ್ರಶೇಖರ ಹಾಗೂ ಸುಜ್ಞಾನ ಪಿಯು ಕಾಲೇಜಿನ ಉಪನ್ಯಾಸಕಿ ಚರಿಷ್ಮಾ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲೆ ಅನಿತಾ ಕುಮಾರಿ, ಮುಖ್ಯೋಪಾಧ್ಯಾಯಿನಿ ಸ್ಪೂರ್ತಿ ಎ., ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕ ರಜತ್ ಭಟ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕುಮಾರ್ ಧನ್ಯವಾದ ಸಮರ್ಪಿಸಿದರು.

Join WhatsApp

Join Now

Join Telegram

Join Now

Read more

ವಿದ್ಯಾರಣ್ಯ ಅಂಗಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಕರಾವಳಿ ಸೊಗಡಿನ ವೇಷ ಭೂಷಣ,ಶಾಸ್ತ್ರ, ಸಂಪ್ರದಾಯಗಳ ವೈಭವದ ಮೆರವಣಿಗೆ

ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ರಘು ಮಧ್ಯಸ್ಥ ಅವಿರೋಧ ಆಯ್ಕೆ

ಸುಜ್ಞಾನ ವಿದ್ಯಾ ಸಂಸ್ಥೆಯಲ್ಲಿ ‘ವಾಲ್ಬೆಲ್ಲ’ ಕುಂದಾಪ್ರ ಕನ್ನಡದ ಸಂಸ್ಕೃತಿ ಸಮಾರಂಭದ ಸಮಾರೋಪ: ಯುವಜನತೆ ದುಶ್ಚಟಗಳಿಂದ ದೂರವಿದ್ದು ಗುರಿಯತ್ತ ಸಾಗಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ಸುಜ್ಞಾನದಂಗಳದಿ ವಾಲ್ಬೆಲ್ಲದ ಸವಿ ಸಂಭ್ರಮ: ಕುಂದಾಪ್ರ ಕನ್ನಡದ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಕುಂದಾಪ್ರ ಕನ್ನಡದ ಸವಿ ಉಳಿಸಿ ಬೆಳಸುವ ಜವಾಬ್ದಾರಿ ನಮ್ಮದು.ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

Leave a Comment