ಎಕ್ಸಲೆಂಟ್ ಕಾಲೇಜು, ಸುಣ್ಣಾರಿ, ಕುಂದಾಪುರ: “ರಾಜ್ಯದಲ್ಲಿ ಅತ್ಯುತ್ತಮ ಸಾಧನೆ”

ಕುಂದಾಪುರ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಕುಮಾರಿ ಮಾನ್ಯ 600ರಲ್ಲಿ 597, ಅನುಪ್ ಶೇಖರ್ ನಾಯ್ಕ 600 ರಲ್ಲಿ 595 ಅಂಕಗಳೊಂದಿಗೆ ರಾಜ್ಯದಲ್ಲಿಯೇ ಅತ್ಯುತ್ತಮ ರ‍್ಯಾಂಕ್‌ನ್ನು ಗಳಿಸಿ ಎಕ್ಸಲೆಂಟ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.

ಒಟ್ಟು ಹಾಜರಾದ 314ವಿದ್ಯಾರ್ಥಿಗಲ್ಲಿ 232ವಿದ್ಯಾರ್ಥಿಗಳು ವಿಶಿಷ್ಟಶ್ರೇಣಿಯಲ್ಲಿ ಹಾಗೂ 82 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ಉತ್ತೀರ್ಣರಾಗುವುದರೊಂದಿಗೆ ರಾಜ್ಯದಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ.

ಬಾಲಗೌಡ ಬಸವರಾಜ್‌ ಮಂಗೋಜಿ(592), ಆಯುಷ್‌ಶೆಣೈ(592), ಕಿಶನ್‌ಕುಮಾರ್‌ ಗಿರೀಶ್‌ಹೆಗ್ಡೆ(592), ಸನ್ಸಿತಾ.ಎಸ್.ಎನ್(592), ಸಾನ್ವಿಶೆಟ್ಟಿ(591), ತನ್ವಿಶೆಟ್ಟಿ(590), ತ್ರಿಶಾ(590) ಒಟ್ಟು 9 ರ‍್ಯಾಂಕ್‌ಗಳೊಂದಿಗೆ ರಾಜ್ಯದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಿದ್ದಾರೆ.

ಈ ರೀತಿ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಎಂ.ಎಂ. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಶ್ರೀ ಎಂ.ಮಹೇಶ್‌ಹೆಗ್ಡೆಯವರು, ಹಾಗೂ ಶ್ರೀಮತಿ ದೀಪಾ ಎಂ.ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್‌ಶೆಟ್ಟಿ ಹಾಗೂ ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment