ಮಾಜೀ ಶಾಸಕರ ರಾಜಕೀಯ ಒತ್ತಡ ದುರುಪಯೋಗ ಆರೋಪ: ಬೆದರಿಕೆ, ಸುಳ್ಳು ಕೇಸು ವಿರುದ್ಧ ಅಜಿತ್ ಶೆಟ್ಟಿ ಕಿಡಿ

ಮಾಜೀ ಶಾಸಕರ ರಾಜಕೀಯ ಒತ್ತಡ ದುರುಪಯೋಗ ಆರೋಪ: ಬೆದರಿಕೆ, ಸುಳ್ಳು ಕೇಸು ವಿರುದ್ಧ ಅಜಿತ್ ಶೆಟ್ಟಿ ಕಿಡಿ


ಕುಂದಾಪುರ, ಫೆ. 12: ಮಾಜಿ ಶಾಸಕ ಸುಕುಮಾರ್ ಶೆಟ್ಟಿಯವರ ಸಹಚರರು ಮನೆಗೆ ಬಂದು ಗಲಾಟೆ ನಡೆಸಿದರೆಂದು ಆರೋಪಿಸಿರುವ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ, ನಂತರ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಫೆಬ್ರವರಿ 7, 2026 ರಂದು ಸಂಜೆ ಸುಮಾರು 6.30ರ ವೇಳೆಗೆ ತಾನು ಮನೆಯಲ್ಲಿ ಇಲ್ಲದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು, ಮಾಜಿ ಶಾಸಕರ ಸಹಚರರು ಎಂದು ಹೇಳಲಾಗುವ ನಾಲ್ವರು ಮದ್ಯಪಾನ ಮಾಡಿ ತನ್ನ ಮನೆಗೆ ಬಂದು ಗಲಾಟೆ ನಡೆಸಿ ತೆರಳಿದ್ದಾರೆ ಎಂದು ಅಜಿತ್ ಶೆಟ್ಟಿ ದೂರಿದ್ದಾರೆ.

ಈ ಸಂಬಂಧ ದಕ್ಷ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದ ನಂತರ, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 0006/2026 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಆದರೆ, ತನ್ನ ಬೆಂಬಲಿಗರ ವಿರುದ್ಧ ದಾಖಲಾಗಿರುವ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮಾಜಿ ಶಾಸಕ ಸುಕುಮಾರ್ ಶೆಟ್ಟಿಯವರು ರಾಜಕೀಯ ಪ್ರಭಾವ ಬಳಸಿಕೊಂಡು ಪೊಲೀಸ್ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ, ಕೋಟ ಪೊಲೀಸ್ ಠಾಣೆಯಲ್ಲಿ ಆರೋಪಿ ಸಂದೀಪ್ ಶೆಟ್ಟಿಯಿಂದ ತನ್ನ ವಿರುದ್ಧ ಸುಳ್ಳು ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ಅಜಿತ್ ಶೆಟ್ಟಿ ಆರೋಪಿಸಿದ್ದಾರೆ.

ಇದಕ್ಕೂ ಮುನ್ನವೇ ದೂರವಾಣಿ ಮೂಲಕ ನೇರ ಬೆದರಿಕೆ ಹಾಕಲಾಗಿತ್ತು ಎಂದು ಹೇಳಿರುವ ಅವರು, ಈಗ ದಾಖಲಾಗಿರುವ ಪ್ರಕರಣ ಅದೇ ಬೆದರಿಕೆಗಳ ಮುಂದುವರಿದ ರೂಪವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಶಕ್ತಿಯನ್ನು ಬಳಸಿಕೊಂಡು ನಿರಪರಾಧಿಗಳನ್ನು ಹೆದರಿಸುವ ಹಾಗೂ ಮೌನಗೊಳಿಸುವ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಗಮನಕ್ಕೆ ವಿಷಯ ತಂದಿರುವುದಾಗಿ ಹೇಳಿದ ಅವರು, ಶೀಘ್ರದಲ್ಲೇ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಕಾನೂನಿಗಿಂತ ರಾಜಕೀಯ ಪ್ರಭಾವ ದೊಡ್ಡದಾಗಬಾರದು. ಸುಳ್ಳು ಪ್ರಕರಣಗಳ ಮೂಲಕ ನ್ಯಾಯವನ್ನು ಹತ್ತಿಕ್ಕುವ ಪ್ರಯತ್ನಗಳಿಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ತನ್ನ ಆಗ್ರಹ ಎಂದು ಸ್ಪಷ್ಟಪಡಿಸಿದ್ದಾರೆ.

“ಸತ್ಯದ ಪರ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಬೆದರಿಕೆ, ಸುಳ್ಳು ಕೇಸು ಹಾಗೂ ರಾಜಕೀಯ ಒತ್ತಡಗಳಿಗೆ ನಾನು ಭಯಪಡುವುದಿಲ್ಲ,” ಎಂದು ಅಜಿತ್ ಕುಮಾರ್ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment