ರಸ್ತೆ ಅಪಘಾತಗಳಲ್ಲಿ ಯುವಕರ ಜೀವಹಾನಿ ಕಳವಳಕಾರಿ – ಪೋಷಕರು, ಯುವ ಸಮುದಾಯ ಜಾಗೃತರಾಗಲಿ: ಡಿವೈಎಸ್ಪಿ ಪ್ರಭು ಡಿ.ಟಿ.

ರಸ್ತೆ ಅಪಘಾತಗಳಲ್ಲಿ ಯುವಕರ ಜೀವಹಾನಿ ಕಳವಳಕಾರಿ – ಪೋಷಕರು, ಯುವ ಸಮುದಾಯ ಜಾಗೃತರಾಗಲಿ: ಡಿವೈಎಸ್ಪಿ ಪ್ರಭು ಡಿ.ಟಿ.

ಸಾಲಿಗ್ರಾಮ: ರಸ್ತೆ ಅಪಘಾತಗಳಲ್ಲಿ ಯುವಕರು ಅತೀ ದೊಡ್ಡ ಸಂಖ್ಯೆಯಲ್ಲಿ ಬಲಿಯಾಗುತ್ತಿರುವುದು ಅತ್ಯಂತ ನೋವಿನ ವಿಷಯವಾಗಿದ್ದು, ಈ ಬಗ್ಗೆ ಪೋಷಕರು ಹಾಗೂ ಯುವ ಸಮುದಾಯ ಹೆಚ್ಚು ಜಾಗೃತರಾಗಬೇಕಾದ ಅಗತ್ಯವಿದೆ ಎಂದು ಉಡುಪಿ ಉಪವಿಭಾಗದ ಡಿವೈಎಸ್ಪಿ ಪ್ರಭು ಡಿ.ಟಿ. ಅವರು ಕಳವಳ ವ್ಯಕ್ತಪಡಿಸಿದರು.

ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನದ ಜ್ಞಾನ ಮಂದಿರದಲ್ಲಿ ಬುಧವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ–2026ರ ಅಂಗವಾಗಿ ಆಯೋಜಿಸಲಾದ ರಸ್ತೆ ಸುರಕ್ಷತೆ ಹಾಗೂ ಸೈಬರ್ ಕ್ರೈಮ್ ಅಪರಾಧಗಳ ಕುರಿತು ಜಾಗೃತಿ ಸಭೆ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 

ವಿದ್ಯಾರ್ಥಿಗಳಿಗೆ ಕಾನೂನು ಅರಿವು, ಸಂಚಾರ ನಿಯಮಗಳ ಮಹತ್ವ ಹಾಗೂ ಸೈಬರ್ ಅಪರಾಧಗಳಿಂದ ದೂರ ಉಳಿಯುವ ಕುರಿತು ವಿವರವಾಗಿ ಮಾಹಿತಿ ನೀಡಿದರು.

ಭವಿಷ್ಯದಲ್ಲಿ ಬಲಿಷ್ಠ ಹಾಗೂ ಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಯುವ ಸಮುದಾಯಕ್ಕೆ ಮಹತ್ತರ ಜವಾಬ್ದಾರಿ ಇದ್ದು, ಪೋಷಕರು ಮಕ್ಕಳಿಗೆ ವಾಹನ ನೀಡುವ ಮುನ್ನ ಕಡ್ಡಾಯವಾಗಿ ಚಾಲನಾ ಪರವಾನಿಗೆ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಜೊತೆಗೆ ಸಂಚಾರ ನಿಯಮಗಳ ಬಗ್ಗೆ ನಿರಂತರ ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪೊಲೀಸ್‌, ಬ್ರಹ್ಮಾವರ ಪೊಲೀಸ್ ವೃತ್ತದ ಕೋಟ ಪೊಲೀಸ್ ಠಾಣೆ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ ಶಿರೂರು ಮುದ್ದು ಮನೆ ಕಣ್ಣಿನ ಆಸ್ಪತ್ರೆ ಇವರ ಜಂಟಿ ಆಶ್ರಯದಲ್ಲಿ, ಶ್ರೀ ಗುರು ನರಸಿಂಹ ದೇವಸ್ಥಾನ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಹಾಗೂ ಪಂಚವಾರ್ಣ ಸಂಘಟನೆ ಕೋಟ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಸಭಾಧ್ಯಕ್ಷತೆಯನ್ನು ದೇವಸ್ಥಾನದ ಅಧ್ಯಕ್ಷ ಕೆ.ಎಸ್. ಕಾರಂತ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಕೋಟ–ಸಾಲಿಗ್ರಾಮ ಸಾಸ್ತಾನದ ಹಿರಿಯ ಆಟ ಚಾಲಕರಾದ ರತ್ನಾಕರ ಪೈ ಕೋಟ, ವೆಂಕಟೇಶ್ ಪೂಜಾರಿ ಕೋಟ, ನಾರಾಯಣ ಪೂಜಾರಿ ಸಾಲಿಗ್ರಾಮ ಹಾಗೂ ನಾರಾಯಣ ಗುಂಡ್ಮಿ ಅವರನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶಿರೂರು ಮುದ್ದು ಮನೆ ಕಣ್ಣಿನ ಆಸ್ಪತ್ರೆಯ ಸಂಯೋಜಕ ಶಂಕರ್ ಶೆಟ್ಟಿ, ಕೂಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಯಶಶ್ರೀ, ಆರ್‌ಟಿಒ ಅಧಿಕಾರಿ ಲಕ್ಷ್ಮೀ ನಾರಾಯಣ ನಾಯಕ್, ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಉಪಸ್ಥಿತರಿದ್ದರು.

ಪತ್ರಕರ್ತ ರವೀಂದ್ರ ಸ್ವಾಗತಿಸಿ, ಸುಜಾತ ಬಾಯರಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕೋಟ ಠಾಣೆಯ ಎಎಸ್‌ಐ ಜಾಭೆ ಗೌಡ ಧನ್ಯವಾದ ಸಲ್ಲಿಸಿದರು. ಎಎಸ್‌ಐ ಗೋಪಾಲ್ ಪೂಜಾರಿ ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಸಹಕಾರ ನೀಡಿದರು.

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಕೋಟ ಮೂರ್ಕೈಯಿಂದ ಶ್ರೀ ಗುರು ನರಸಿಂಹ ದೇವಸ್ಥಾನವರೆಗೆ ಕಾಲ್ನಡಿಗೆ ಜಾಥ ನಡೆಯಿತು. ವಿವೇಕ ವಿದ್ಯಾ ಸಂಸ್ಥೆ, ಆಶಿತಾ ಶಿಕ್ಷಣ ಸಂಸ್ಥೆ, ಫಾರ್ಚುನ್ ಸೈನ್ಸ್ ಕಾಲೇಜು ಹಾಗೂ ಇಸಿಆರ್ ಕಾಲೇಜಿನ ವಿದ್ಯಾರ್ಥಿಗಳು ಜಾಥದಲ್ಲಿ ಭಾಗವಹಿಸಿದರು.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment