ಬಾಳೆಬರೆ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು!

On: February 28, 2026 11:43 AM
Follow Us:

ಬಾಳೆಬರೆ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು!


ಸಿದ್ದಾಪುರ, ಫೆ.28: ಸಿದ್ದಾಪುರ ಸಮೀಪದ ಬಾಳೆಬರೆ ಘಾಟಿಯಲ್ಲಿ ಶನಿವಾರ ಮಧ್ಯಾಹ್ನ ಖಾಸಗಿ ಬಸ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.

ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಸಮಯಕ್ಕೆ ಮುನ್ನ ಇಳಿದಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಂದಾಪುರದಿಂದ ಸಾಗರದತ್ತ ಹೊರಟಿದ್ದ ‘ಶ್ರೀ ದುರ್ಗಾಂಬ’ ಹೆಸರಿನ ಬಸ್ ಸಿದ್ದಾಪುರ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ವೇಳೆ ಬಾಳೆಬರೆ ಘಾಟಿ ಪ್ರದೇಶದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ಚಾಲಕ ಮತ್ತು ಸಿಬ್ಬಂದಿ ಬಸ್‌ನ್ನು ತಕ್ಷಣ ನಿಲ್ಲಿಸಿ ಪರಿಶೀಲನೆ ನಡೆಸುವಷ್ಟರಲ್ಲಿ ವಾಹನದ ಒಳಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದು, ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಕವಾಗಿ ಹಬ್ಬಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಘಟನೆಯಿಂದಾಗಿ ಕೆಲವು ಹೊತ್ತಿನ ಕಾಲ ಘಾಟಿ ಪ್ರದೇಶದಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಇತ್ತೀಚಿನ ದಿನಗಳಲ್ಲಿ ಬಸ್, ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಘಟನೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವಾಹನಗಳ ನಿಯಮಿತ ತಪಾಸಣೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Join WhatsApp

Join Now

Join Telegram

Join Now

Read more

ಕೋಟ “ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ: ಗೋಹತ್ಯೆ ನಿಷೇಧ ಕಾಯ್ದೆ ಪ್ರಕರಣದಲ್ಲಿ ನಾಲ್ವರಿಗೆ ನ್ಯಾಯಾಲಯದ ದಂಡ”

ಸಿದ್ದಾಪುರ: ಬಿಜೆಪಿ ನಾಯಕರ ವೈಫಲ್ಯವೇ ವರಾಹಿ ಅವ್ಯವಸ್ಥೆಗೆ ಕಾರಣ – ವಿನಯ ಕುಮಾರ್ ಸೊರಕೆ ಆಕ್ರೋಶ.

ಕುಂದಾಪುರ: ನಿನ್ನೆ ಅವಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ – ಇಂದು ತಡೆಯಾಜ್ಞೆ? ಇದು ಕಾಂಗ್ರೆಸ್ ನಡೆ.

ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅನುಭವಿ ನಾಯಕ ತಿಮ್ಮ ಪೂಜಾರಿ ನೇಮಕ

ಯುದ್ಧದ ಕಾರ್ಮೋಡ ನಡುವೆ ಸಾಲಿಗ್ರಾಮ, ನಂಚಾರು ವಿವಿದೆಡೆ ಆಕಾಶದಲ್ಲಿ ಜೆಟ್ ಗರ್ಜನೆ: ಜನರಲ್ಲಿ ತೀವ್ರ ಆತಂಕ.! ಸರ್ವೆ ಕಾರ್ಯವೇ ಕಾರಣವೆಂಬ ಸುಳಿವು

ಸಂಪತ್ ಕುಮಾರ್ ಶೆಟ್ಟಿಯವರಿಗೆ ಪ್ರತಿಷ್ಟಿತ ವಿಜಯರತ್ನ ಪ್ರಶಸ್ತಿ – 2026: ಉದ್ಯಮ ಕ್ಷೇತ್ರ ಮತ್ತು ಸಮಾಜ ಸೇವೆಗೆ ಸಂದ ಗೌರವ

Leave a Comment